Ephesians 4:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.
Kannada BSI Bible 2016
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
Kannada Bible (KNCL) BSI 2016
ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.