Ephesians 4:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
Kannada BSI Bible 2016
ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.
Kannada Bible (KNCL) BSI 2016
ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.