Ephesians 4:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಬಾಯಿಂದ ಕೆಟ್ಟ ಮಾತುಗಳು ಬಾರದಿರಲಿ. ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
Kannada BSI Bible 2016
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಭಕ್ತಿಯನ್ನು ವೃದ್ಧಿಮಾಡುವಂಥ ಕಾಲೋಚಿತವಾದ ಮಾತು ಇದ್ದರೆ ಕೇಳುವವರ ಹಿತಕ್ಕಾಗಿ ಅದನ್ನು ಆಡಿರಿ.
Kannada Bible (KNCL) BSI 2016
ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.