Ephesians 5:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
Kannada BSI Bible 2016
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
Kannada Bible (KNCL) BSI 2016
ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.