Ephesians 5:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
Kannada BSI Bible 2016
ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರೆ.
Kannada Bible (KNCL) BSI 2016
ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.