Ephesians 5:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
Kannada BSI Bible 2016
ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಾ ಇದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು.
Kannada Bible (KNCL) BSI 2016
ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ.