Ephesians 5:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿಮ್ಮಲ್ಲಿ ಪ್ರತಿ ಪುರಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
Kannada BSI Bible 2016
ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಿರಲಿ; ನಿಮ್ಮಲ್ಲಿ ಪ್ರತಿಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯು ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.
Kannada Bible (KNCL) BSI 2016
ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.