Ephesians 6:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
Kannada BSI Bible 2016
ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
Kannada Bible (KNCL) BSI 2016
ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.