Ephesians 6:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
Kannada BSI Bible 2016
ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಕಠಿನ ಯುದ್ಧವು ನಡೆಯುವ ದಿವಸದಲ್ಲಿ ಆ ವೈರಿಗಳನ್ನು ಎದುರಿಸುವದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ಜಯಶಾಲಿಗಳಾಗಿ ನಿಲ್ಲುವದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ತೆಗೆದುಕೊಳ್ಳಿರಿ.
Kannada Bible (KNCL) BSI 2016
ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.