Ephesians 6:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.
Kannada BSI Bible 2016
ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
Kannada Bible (KNCL) BSI 2016
ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.