Ephesians 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
Kannada BSI Bible 2016
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೋಸ್ಕರ ಸಹ ಪ್ರಾರ್ಥನೆಮಾಡಿರಿ. ನಾನು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಾರ್ಥವನ್ನು ಭಯವಿಲ್ಲದೆ ತಿಳಿಸುವದಕ್ಕೆ ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
Kannada Bible (KNCL) BSI 2016
ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.