Ephesians 6:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
Kannada BSI Bible 2016
ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.
Kannada Bible (KNCL) BSI 2016
ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.