Ephesians 6:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
Kannada BSI Bible 2016
ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸಂಗತಿಗಳು ನಿಮಗೆ ಸಹ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
Kannada Bible (KNCL) BSI 2016
ಪ್ರಿಯ ಸಹೋದರ ತುಖಿಕನು ನನ್ನ ವಿಷಯವಾಗಿಯೂ ನನ್ನ ಕೆಲಸಕಾರ್ಯಗಳ ವಿಷಯವಾಗಿಯೂ ನಿಮಗೆ ತಿಳಿಸುವನು. ಆತ ಪ್ರಭುವಿನ ಪ್ರಾಮಾಣಿಕ ಸೇವಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.