Ephesians 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ.
Kannada BSI Bible 2016
ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
Kannada Bible (KNCL) BSI 2016
ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.