Ephesians 6:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
Kannada BSI Bible 2016
ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆಯಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
Kannada Bible (KNCL) BSI 2016
ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ.