Esther 1:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಔತಣದ ಏಳನೆಯ ದಿವಸದಲ್ಲಿ ರಾಜನು ದ್ರಾಕ್ಷಾರಸ ಕುಡಿದು ಆನಂದಲಹರಿಯಲ್ಲಿದ್ದಾಗ ತನ್ನ ಆಸ್ಥಾನ ಕಂಚುಕಿಯರಾದ ಮೆಹೂಮಾನ್, ಬಿಜತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೀತರ್, ಕರ್ಕಸ್ ಎಂಬ ಏಳು ಮಂದಿಗೆ ಹೋಗಿ ವಷ್ಟಿರಾಣಿಯನ್ನು ತನ್ನ ರಾಜಮುಕುಟವನ್ನು ಧರಿಸಿ ಕರೆತರಲು ಆಜ್ಞಾಪಿಸಿದನು. ವಷ್ಟಿರಾಣಿಯು ಅತ್ಯಂತ ಸುಂದರಿಯಾಗಿದ್ದಳು. ಆಕೆಯ ಸೌಂದರ್ಯವನ್ನು ತನ್ನ ರಾಜ್ಯದ ಅಧಿಕಾರಿಗಳಿಗೆ ತೋರಿಸಬೇಕೆಂಬುದು ಅವನ ಅಪೇಕ್ಷೆಯಾಗಿತ್ತು. (Verses 10-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
Kannada BSI Bible 2016
ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಏಳನೆಯ ದಿನದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸಪಾನಮಾಡಿ ಆನಂದಲಹರಿಯಲ್ಲಿದ್ದಾಗ
Kannada Bible (KNCL) BSI 2016
ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.