Esther 1:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
Kannada BSI Bible 2016
ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿರಾಣಿಯು - ಬರುವದಿಲ್ಲ ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶನಾದನು.
Kannada Bible (KNCL) BSI 2016
ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.