Esther 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿಕಟವರ್ತಿಗಳಾಗಿದ್ದರು. ಅವರು ಯಾರೆಂದರೆ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷಿಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ, ಪಾರಸಿಯ ಪ್ರಮುಖ ಅಧಿಕಾರಿಗಳು. (Verses 13-14)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
Kannada BSI Bible 2016
ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಧಿನ್ಯಾಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
Kannada Bible (KNCL) BSI 2016
ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು.