Esther 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 13
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
Kannada BSI Bible 2016
ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್, ಆದ್ಮಾತನು, ತರ್ಷೀಷನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಅಹಷ್ವೇರೋಷನ ಒಡ್ಡೋಲಗದಲ್ಲಿ ರಾಜಸಾನಿಧ್ಯಸೇವಕರೂ ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪಾರಸಿಯ ಮತ್ತು ಮೇದ್ಯ ಪ್ರಭುಗಳಿದ್ದರು. ಅವನು ಸಮಯೋಚಿತಜ್ಞಾನವುಳ್ಳವರಾದ ಇವರನ್ನು -
Kannada Bible (KNCL) BSI 2016
ಅರಸ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಪದಾಧಿಕಾರಿಗಳೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪರ್ಷಿಯ ಮತ್ತು ಮೇದ್ಯ ದೇಶಗಳ ರಾಜಪ್ರಮುಖರು ಇದ್ದರು. ಸಮಯೋಚಿತ ವ್ಯವಹಾರ ಜ್ಞಾನಹೊಂದಿದವರಾದ ಇವರನ್ನು ಅರಸನು, ಈ ವಿಷಯವಾಗಿ ವಿಚಾರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಿಗೆ ಬಹು ಹತ್ತಿರವಾಗಿದ್ದ ಪಾರಸಿಯ ಮತ್ತು ಮೇದ್ಯ ದೇಶಗಳ ಏಳುಮಂದಿ ಪ್ರಧಾನರಾದ ಕರ್ಷೇನಾ, ಶೆತಾರ್, ಅದ್ಮಾತಾ, ತಾರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಇವರ ಸಂಗಡ ಮಾತನಾಡಿದನು. ರಾಜ್ಯದಲ್ಲಿ ಇವರು ಅರಸನ ಬಳಿಗೆ ಹೋಗಲು ವಿಶೇಷ ಅನುಮತಿಪಡೆದ ಅತ್ಯಂತ ಶ್ರೇಷ್ಠರಾಗಿದ್ದರು.