Esther 1:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಸ್ಥಾನ ಸೇವಕರ ಮೂಲಕ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ವಷ್ಟಿ ರಾಣಿಯು ನಿರಾಕರಿಸಿದ್ದಾಳೆ. ಇಂಥಾ ತಪ್ಪಿಗೆ ಯಾವ ಶಿಕ್ಷೆಯನ್ನು ವಿಧಿಸಬೇಕು?” ಎಂದು ವಿಚಾರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.
Kannada BSI Bible 2016
ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಕೊಳ್ಳದೆಹೋದ ವಷ್ಟಿರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು ಎಂದು ಕೇಳಲು ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ -
Kannada Bible (KNCL) BSI 2016
“ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಷ್ವೇರೋಷನು, “ಅರಸನ ಅಧಿಕಾರಿಗಳ ಮುಖಾಂತರ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿ ರಾಣಿಯ ವಿರುದ್ಧ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದ ಕ್ರಮವೇನು?” ಎಂದು ಕೇಳಿದನು.