Esther 1:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪರ್ಶಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಈ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪ್ರೋತ್ಸಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು.
Kannada BSI Bible 2016
ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಕೋಪವೂ ಉಂಟಾಗುವದು.
Kannada Bible (KNCL) BSI 2016
ಇದಲ್ಲದೆ, ರಾಣಿಯ ಈ ವರ್ತನೆಯ ಬಗ್ಗೆ ಕೇಳಿಸಿಕೊಂಡ ಪರ್ಷಿಯ, ಮೇದ್ಯ ದೇಶಗಳ ಕುಲೀನ ಸ್ತ್ರೀಯರೂ ಇದೇ ರೀತಿ ಅರಸರ ಪದಾಧಿಕಾರಿಗಳೊಂದಿಗೆ ವರ್ತಿಸುವರು. ಹೀಗೆ ತಿರಸ್ಕಾರವೂ ಕೋಪವೂ ಉಂಟಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ರಾಣಿಯರೆಲ್ಲರೂ ಈ ಹೊತ್ತು ಅರಸನ ಶ್ರೇಷ್ಠರಿಗೂ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವುದು.