Esther 1:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಷ್ವೇರೋಷನು ತನ್ನ ರಾಜ್ಯದ ಎಲ್ಲಾ ಕಡೆಗಳಿಗೆ, ಎಲ್ಲಾ ಸಂಸ್ಥಾನಗಳಿಗೆ ಅವರವರ ಭಾಷೆಯಲ್ಲಿ ಪತ್ರಗಳನ್ನು ಬರೆಯಿಸಿ ರವಾನಿಸಿದನು. ಅವರವರ ಭಾಷೆಯಲ್ಲಿ ಬರೆದ ಪತ್ರದಲ್ಲಿ ಪ್ರತಿಯೊಬ್ಬ ಗಂಡಸು ತನ್ನ ಸಂಸಾರವನ್ನು ಆಳಬೇಕು ಎಂಬುದಾಗಿ ಬರೆಯಲ್ಪಟ್ಟಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
Kannada BSI Bible 2016
ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿದ್ದು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕೆಂಬದಾಗಿ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
Kannada Bible (KNCL) BSI 2016
ಪ್ರತಿಯೊಂದು ಕುಟುಂಬದಲ್ಲೂ ಪುರುಷನೇ ಅಧಿಕಾರ ವಹಿಸಬೇಕು, ಅವನು ಸ್ವಜನರ ಭಾಷೆಯಲ್ಲೇ ವ್ಯವಹಾರ ನಡೆಸಬೇಕು ಎಂದು ತನ್ನ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮುಖೇನ ಪ್ರಕಟಿಸಿದನು. ಇವು ಆಯಾ ಪ್ರಾಂತ್ಯಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲೂ ಬರೆಯಲಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು.