Esther 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಔತಣ ಸಮಾರಂಭವು ನೂರೆಂಭತ್ತು ದಿವಸಗಳ ತನಕ ಮುಂದುವರೆಯಿತು. ಆ ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.
Kannada BSI Bible 2016
ಅವನು ನೂರ ಎಂಭತ್ತು ದಿವಸಗಳ ವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ಅತ್ಯುತ್ತಮವಾಗಿದ್ದ ಮಹಿಮೆಯ ಸೌಂದರ್ಯವನ್ನೂ ತೋರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅನೇಕ ದಿವಸ ಅಂದರೆ ನೂರೆಂಭತ್ತು ದಿವಸಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮಹಾಮಹಿಮೆಯ ವೈಭವಗಳನ್ನೂ ತೋರಿಸಿದನು.
Kannada Bible (KNCL) BSI 2016
ಅರಸನು ತನ್ನ ಘನರಾಜ್ಯದ ಸಿರಿಸಂಪತ್ತನ್ನು, ವೈಭವವನ್ನು ಹಾಗು ರಾಜ್ಯದ ಆಡಂಬರವನ್ನು ಅವರೆಲ್ಲರ ಮುಂದೆ ಬಹುದಿನಗಳವರೆಗೆ ಅಂದರೆ, ನೂರೆಂಬತ್ತು ದಿನಗಳವರೆಗೆ ಪ್ರದರ್ಶಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.