Esther 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
Kannada BSI Bible 2016
ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆ ಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳ ವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದಿನಗಳಾದನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಕನಿಷ್ಠರಿಗೂ ಅರಮನೆಯ ತೋಟದ ಬೈಲಿನಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
Kannada Bible (KNCL) BSI 2016
ಆ ದಿನಗಳು ಕಳೆದ ನಂತರ ಅರಸನು ಶೂಷನ್ ನಗರದ ನಿವಾಸಿಗಳಿಗೆ ಶ್ರೀಮಂತ-ಬಡವ ಎಂಬ ಯಾವ ಭೇದಭಾವ ಮಾಡದೆ ಎಲ್ಲರಿಗೂ ಅರಮನೆಯ ತೋಟದ ಅಂಗಳದಲ್ಲಿ ಏಳು ದಿನಗಳ ಪರಿಯಂತರ ದೊಡ್ಡ ಔತಣವನ್ನೇರ್ಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.