Esther 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಒಳ ಉದ್ಯಾನವನವು ಬಿಳಿ ಮತು ನೀಲಿಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೇರಳೆ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತಶಿಲೆಯ ಕಂಬಗಳಿಗೆ ತೂಗುಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮುತ್ತು ಚಿಪ್ಪು, ರತ್ನಶಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.
Kannada BSI Bible 2016
ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಬಿಳೀ ನೂಲಿನ ಬಟ್ಟೆಗಳೂ ನೀಲಿಬಟ್ಟೆಗಳೂ ಧೂಮ್ರವರ್ಣವುಳ್ಳ ನಾರಿನ ದಾರದಿಂದ ಸಂಗಮೀರ ಕಲ್ಲು ಕಂಬಗಳಲ್ಲಿನ ಬೆಳ್ಳಿಯ ಉಂಗುರಗಳಿಗೆ ಕಟ್ಟಲ್ಪಟ್ಟಿದ್ದವು. ಜರತಾರೆಯ ಕಸೂತಿ ಹಾಕಿರುವ ಲೋಡುಗಳು ಕೆಂಪು ಬಿಳಿ ಹಳದಿ ಕಪ್ಪು ಬಣ್ಣಗಳುಳ್ಳ ಸಂಗಮೀರ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲ್ಪಟ್ಟಿದ್ದವು.
Kannada Bible (KNCL) BSI 2016
ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲಾಗಿದ್ದವು. ಬಿಳಿ ಹಸಿರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದವುಗಳಾಗಿ ಕೆಂಪು, ನೀಲಿ, ಬಿಳಿ, ಕಪ್ಪು ಬಣ್ಣಗಳ ಅಮೃತಶಿಲೆಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.