Esther 1:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
Kannada BSI Bible 2016
ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾನಪಾತ್ರೆಗಳು ಬಂಗಾರದವುಗಳೂ ನಾನಾ ಆಕಾರದವುಗಳೂ ಆಗಿದ್ದವು. ರಾಜದ್ರಾಕ್ಷಾರಸವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
Kannada Bible (KNCL) BSI 2016
ನಾನಾ ಆಕಾರದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿ ದ್ರಾಕ್ಷಾರಸವನ್ನು ಕುಡಿಯಲು ಕೊಡುವ ವ್ಯವಸ್ಥೆ ಮಾಡಲಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನಾನಾ ವಿಧವಾದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವನ್ನು ಧಾರಾಳವಾಗಿ ಕುಡಿಯಲು ಕೊಟ್ಟರು.