Esther 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಮ್ಮ ಇಷ್ಟಾನುಸಾರವಾಗಿ ದ್ರಾಕ್ಷಾರಸವನ್ನು ಕುಡಿಯಲು ಅತಿಥಿಗಳಿಗೆ ಕೊಡಬೇಕೆಂದು ಸೇವಕರಿಗೆ ರಾಜಾಜ್ಞೆಯಾಗಿತ್ತು. ರಾಜಸೇವಕರು ಆ ಆಜ್ಞೆಯನ್ನು ಪಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
Kannada BSI Bible 2016
ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾನಮಾಡುವದರಲ್ಲಿ ಯಾರಿಗೂ ಒತ್ತಾಯಮಾಡಬಾರದೆಂದು ಕ್ರಮವಿತ್ತು. ಪ್ರತಿಯೊಬ್ಬನಿಗೆ ಅವನವನ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
Kannada Bible (KNCL) BSI 2016
ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.