Esther 10:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.
Kannada BSI Bible 2016
ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯನಾದ ಆ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಜನ ಸಮೂಹಕ್ಕೆ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೋಸ್ಕರ ಸುಖಪ್ರಾರ್ಥನಾಪರನೂ ಆಗಿದ್ದನು.
Kannada Bible (KNCL) BSI 2016
ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.