Esther 2:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿದಿನ ಮೊರ್ದೆಕೈ ಅಂತಃಪುರದ ಎದುರಿನಿಂದ ಹೋಗುತ್ತಾ ಬರುತ್ತಾ ಎಸ್ತೇರಳು ಹೇಗಿದ್ದಾಳೆಂದೂ ಅವಳಿಗೆ ಮುಂದೆ ಸಂಭವಿಸುವುದನ್ನೂ ವಿಚಾರಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆಕೆಯ ಕ್ಷೇಮವನ್ನು ಮತ್ತು ಆಕೆ ಮುಂದೆ ಏನು ಮಾಡಬೇಕು ಎಂದು ವಿಚಾರಿಸುವುದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.
Kannada BSI Bible 2016
ಆದರೆ ಎಸ್ತೇರಳ ಕ್ಷೇಮವನ್ನೂ ಅವಳಿಗೆ ಆಗುವಂಥಾದ್ದನ್ನೂ ತಿಳುಕೊಳ್ಳುವದಕ್ಕೆ ಮೊರ್ದೆಕೈ ದಿನಂಪ್ರತಿಯಲ್ಲಿ ಸ್ತ್ರೀಯರ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆಕೆಯ ಈಗಿನ ಸ್ಥಿತಿಯನ್ನೂ ಮುಂದಿನ ಗತಿಯನ್ನೂ ವಿಚಾರಿಸುವದಕ್ಕಾಗಿ ಪ್ರತಿದಿನವೂ ಅಂತಃಪುರದ ಪ್ರಾಕಾರದ ಮುಂದೆ ತಿರುಗಾಡುತ್ತಿದ್ದನು.
Kannada Bible (KNCL) BSI 2016
ಎಸ್ತೇರಳ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಮೊರ್ದೆಕೈ ಪ್ರತಿದಿನ ಅಂತಃಪುರದ ಅಂಗಳದ ಬಳಿ ಬಂದು ಹೋಗುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಎಸ್ತೇರಳ ಕ್ಷೇಮವನ್ನೂ, ಅವಳಿಗೆ ಆಗುವಂಥಾದ್ದನ್ನೂ ತಿಳಿದುಕೊಳ್ಳುವುದಕ್ಕೆ ಮೊರ್ದೆಕೈ ಪ್ರತಿದಿನವೂ ಸ್ತ್ರೀಯರಿದ್ದ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.