Esther 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನ ಬಳಿಗೆ ಹೋಗಲು ಎಸ್ತೇರಳ ಸರದಿ ಬಂದಾಗ ಆಕೆ ಏನನ್ನೂ ಕೇಳಿಕೊಳ್ಳಲಿಲ್ಲ. ತಾನು ಏನನ್ನು ತೆಗೆದುಕೊಂಡು ಹೋಗಬೇಕೆಂದು ರಾಜನ ಸ್ತ್ರೀಯರ ಮೇಲ್ವಿಚಾರಕನಾಗಿದ್ದ ರಾಜಕಂಚುಕಿ ಹೇಗೈನನ್ನು ಮಾತ್ರ ಕೇಳಿದಳು. (ಎಸ್ತೇರಳು ಮೊರ್ದೆಕೈಯ ಚಿಕ್ಕಪ್ಪ ಅಭೀಹೈಲನ ಮಗಳೂ ತನ್ನ ಸಾಕು ಮಗಳೂ ಆಗಿದ್ದಳು.) ಎಸ್ತೇರಳನ್ನು ನೋಡಿದವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನ ಬಳಿಗೆ ಹೋಗುವುದಕ್ಕೆ ಮೊರ್ದೆಕೈಯ ದತ್ತುಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇಮಿಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
Kannada BSI Bible 2016
ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನ ಬಳಿಗೆ ಹೋಗುವದಕ್ಕೆ ಮೊರ್ದೆಕೈಯ ದತ್ತಪುತ್ರಿಯೂ ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳ ಸರತಿ ಬಂದಾಗ ಅಂತಃಪುರ ಪಾಲಕನಾದ ಹೇಗೈ ಎಂಬ ರಾಜಕಂಚುಕಿಯು ನೇವಿುಸಿದ್ದನ್ನೇ ಹೊರತು ಆಕೆ ಬೇರೇನೂ ಕೇಳಲಿಲ್ಲ. ನೋಡುವವರೆಲ್ಲರೂ ಆಕೆಯನ್ನು ಮೆಚ್ಚುತ್ತಿದ್ದರು.
Kannada Bible (KNCL) BSI 2016
ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.