Esther 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಹತ್ತನೇ ತಿಂಗಳಾದ ಟೀಬೇತ್ ಮಾಸದಲ್ಲಿ ರಾಜನ ಏಳನೇ ವರ್ಷದಲ್ಲಿ ಎಸ್ತೇರಳು ಅಹಷ್ವೇರೋಷನ ರಾಜನಿವಾಸಕ್ಕೆ ಕರೆದೊಯ್ಯಲ್ಪಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳ್ವಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರೆದುಕೊಂಡು ಬಂದರು.
Kannada BSI Bible 2016
ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್‌ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಅಹಷ್ವೇರೋಷನ ಬಳಿಗೆ ಅವನ ಆಳಿಕೆಯ ಏಳನೆಯ ವರುಷದ ಹತ್ತನೆಯ ತಿಂಗಳಾದ ಪುಷ್ಯ ಮಾಸದಲ್ಲಿ ಆಕೆಯನ್ನು ರಾಜಗೃಹಕ್ಕೆ ಕರತಂದರು. ಅರಸನು ಎಲ್ಲಾ ಸ್ತ್ರೀಯರಲ್ಲಿ ಎಸ್ತೇರಳನ್ನು ಮೆಚ್ಚಿದನು.
Kannada Bible (KNCL) BSI 2016
ಅರಸ ಅಹಷ್ವೇರೋಷನ ಆಳ್ವಿಕೆಯ ಏಳನೇ ವರ್ಷದ ಹತ್ತನೆ ತಿಂಗಳಾದ ಪುಷ್ಯಮಾಸದಲ್ಲಿ (ತೇಬೆತ್ ಮಾಸದಲ್ಲಿ) ಆಕೆಯನ್ನು ಅರಸನ ಬಳಿಗೆ ಕರೆತರಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.