Esther 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊರ್ದೆಕೈ ಅರಮನೆಯ ಹೆಬ್ಬಾಗಿಲ ಬಳಿ ಕುಳಿತುಕೊಂಡಿದ್ದ ಸಮಯದಲ್ಲಿ ಒಂದು ವಿಷಯ ನಡೆಯಿತು. ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ದ್ವಾರಪಾಲಕರು ಅರಸನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಲು ಒಳಸಂಚು ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.
Kannada BSI Bible 2016
ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ಹೆಬ್ಬಾಗಲಿನಲ್ಲಿ ಕೂತುಕೊಂಡಿದ್ದಾಗ ಅರಮನೆಯ ದ್ವಾರಪಾಲಕರಾದ ಬಿಗೆತಾನ್ ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರೋಧವಾಗಿ ಕೈಯೆತ್ತಬೇಕೆಂದು ಒಳಸಂಚುಮಾಡಿದರು.
Kannada Bible (KNCL) BSI 2016
ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.