Esther 2:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಬೆನ್ಯಾಮೀನ್ ಕುಲಕ್ಕೆ ಸೇರಿದ ಮೊರ್ದೆಕೈ ಎಂಬ ಹೆಸರಿನ ಒಬ್ಬ ಯೊಹೂದ್ಯನಿದ್ದನು. ಇವನು ಯಾಯೀರನ ಮಗನೂ ಕೀಷನ ಮೊಮ್ಮಗನೂ ಆಗಿದ್ದು ರಾಜಧಾನಿಯಾದ ಶೂಷನ್‌ನಲ್ಲಿಯೇ ವಾಸಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬ ಒಬ್ಬ ಯೆಹೂದ್ಯ ಮನುಷ್ಯನು ವಾಸಮಾಡುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗೀಯ ಮೊಮ್ಮಗನೂ, ಯಾಯೀರನ ಮಗನೂ ಆಗಿದ್ದನು.
Kannada BSI Bible 2016
ಆದರೆ ಶೂಷನಿನ ಅರಮನೆಯಲ್ಲಿ ಬೆನ್ಯಾವಿಾನ ನವನಾದ ಕೀಷನ ಮಗನಾದ ಶಿವ್ಗೆಾ ಮಗನಾದ ಯಾಯಾರನ ಮಗನಾದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೂಷನ್ ಕೋಟೆಯಲ್ಲಿ ಮೊರ್ದೆಕೈ ಎಂಬೊಬ್ಬ ಯೆಹೂದಿ ಮನುಷ್ಯನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್‍ಕುಲದ ಕೀಷನ ಮರಿಮಗನೂ ಶಿಮ್ಗೀಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.
Kannada Bible (KNCL) BSI 2016
ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.