Esther 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಮೊರ್ದೆಕೈಯನ್ನು ಸೆರೆಹಿಡಿದು ತಂದಿದ್ದನು. ಯೆಹೂದದ ಅರಸನಾದ ಯೆಹೋಯಾಕೀನನೊಂದಿಗೆ ಸೆರೆಒಯ್ಯಲ್ಪಟ್ಟ ಗುಂಪಿನೊಂದಿಗೆ ಇವನೂ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಇವನೂ ಒಬ್ಬನು.
Kannada BSI Bible 2016
ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದರಾಜನಾದ ಯೆಹೋಯಾಕೀನನೊಡನೆ ಸೆರೆಯೊಯ್ಯಲ್ಪಟ್ಟವರಲ್ಲಿ ಇವನೊಬ್ಬನು.
Kannada Bible (KNCL) BSI 2016
ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಂದ ಸೆರೆಹಿಡಿಯಲಾದ ಯೆಹೂದ ಅರಸನಾದ ಯೆಕೋನ್ಯನ ಸಂಗಡ ಜೆರುಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಇವನೂ ಒಬ್ಬನಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೆರೆಯಾಗಿ ತಂದ ಯೆಹೂದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಒಬ್ಬನಾಗಿದ್ದನು.