Esther 2:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜಾಜ್ಞೆಯು ರಾಜ್ಯದ ಎಲ್ಲಾ ಭಾಗಗಳಲ್ಲಿ ಪ್ರಕಟಿಸಲ್ಪಟ್ಟಾಗ ಅನೇಕ ಕನ್ಯೆಯರನ್ನು ರಾಜಧಾನಿಯಾದ ಶೂಷನ್‌ಗೆ ಕರೆದುಕೊಂಡು ಬಂದರು. ಇವರನ್ನೆಲ್ಲಾ ಹೇಗೈಯ ವಶಕ್ಕೆಕೊಟ್ಟರು. ಆ ಕನ್ಯೆಯರಲ್ಲಿ ಎಸ್ತೇರಳು ಸಹ ಒಬ್ಬಳಾಗಿದ್ದಳು. ಎಸ್ತೇರಳನ್ನೂ ಅರಮನೆಗೆ ಕರೆದು ಕೊಂಡು ಹೋಗಿ ಹೇಗೈಯ ವಶಕ್ಕೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನ ನಿರ್ಣಯವೂ, ಆಜ್ಞೆಯೂ ಪ್ರಕಟಿಸಲ್ಪಟ್ಟ ತರುವಾಯ ಕಾರ್ಯನಿರ್ವಾಹಕರು ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೇರಳೂ ಅರಮನೆಗೆ ಬಂದು ಅಂತಃಪುರ ಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು.
Kannada BSI Bible 2016
ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನ ನಿರ್ಣಯವೂ ಆಜ್ಞೆಯೂ ಪ್ರಕಟಿಸಲ್ಪಟ್ಟು [ಕಾರಭಾರಿಗಳು] ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೇರಳೂ ಅರಮನೆಗೆ ತರಲ್ಪಟ್ಟು ಅಂತಃಪುರಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು.
Kannada Bible (KNCL) BSI 2016
ಅರಸನ ನಿರ್ಣಯದ ಪ್ರಕಾರ ರಾಜಾಜ್ಞೆಯು ಎಲ್ಲೆಡೆ ಪ್ರಕಟವಾಯಿತು. ಅನೇಕ ಮಂದಿ ಕನ್ಯೆಯರನ್ನು ಶೂಷನ್ ನಗರಕ್ಕೆ ಕರೆತಂದು ಅಂತಃಪುರಪಾಲಕನಾದ ಹೇಗೈಯನ ವಶಕ್ಕೆ ಒಪ್ಪಿಸಲಾಯಿತು. ಇಂಥವರಲ್ಲಿ ಎಸ್ತೇರಳೂ ಒಬ್ಬಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನ ಮಾತನ್ನು ಮತ್ತು ಅವನ ಕಟ್ಟಳೆಯನ್ನು ಕೇಳಿದ ತರುವಾಯ ಶೂಷನಿನ ಅರಮನೆಯಲ್ಲಿ ಹೇಗೈಯನ ವಶಕ್ಕೆ ಅನೇಕ ಕನ್ಯೆಯರನ್ನು ಒಪ್ಪಿಸಲಾಯಿತು. ಎಸ್ತೇರಳು ಸಹ ಅರಸನ ಅರಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಜವಾಬ್ದಾರಿಕೆಯ ಕೋಣೆಯಲ್ಲಿ ಇದ್ದಳು.