Esther 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೇಗೈ ಎಸ್ತೇರಳನ್ನು ಇಷ್ಟಪಟ್ಟನು. ಆಕೆ ಅವನ ಮೆಚ್ಚಿಗೆಗೆ ಪಾತ್ರಳಾದಳು. ಆಕೆಗೆ ಅರಮನೆಯಿಂದ ಏಳು ಮಂದಿ ಸೇವಕಿಯರನ್ನು ಕೊಟ್ಟು ಆಕೆಯ ಊಟೋಪಚಾರಗಳಲ್ಲಿ ಅಥವಾ ಸೌಂದರ್ಯ ಅಭಿವೃದ್ಧಿಗಾಗಿ ಲೇಪನ ವಸ್ತುಗಳ ವಿಷಯದಲ್ಲಿ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದನು. ಇದಾದ ಬಳಿಕ ಎಸ್ತೇರ್ ಮತ್ತು ಆಕೆಯ ಸೇವಕಿಯರನ್ನು ಅಂತಃಪುರದ ಉತ್ತಮ ಭಾಗದಲ್ಲಿ ಇಳಿದುಕೊಳ್ಳುವ ವ್ಯವಸ್ಥೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೈಯು ಆಕೆಯನ್ನು ಮೆಚ್ಚಿ, ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನದ್ರವ್ಯಗಳನ್ನೂ ಮತ್ತು ಭೋಜನವನ್ನು ಒದಗಿಸಿದನು. ಅವನು ಆಕೆಗೊಸ್ಕರ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಆರಿಸಿಕೊಂಡು ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
Kannada BSI Bible 2016
ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗೈಯು ಆಕೆಯನ್ನು ಮೆಚ್ಚಿ ತನ್ನ ದಯೆಗೆ ಪಾತ್ರಳಾದ ಆಕೆಗೋಸ್ಕರ ತಕ್ಕ ಲೇಪನ ದ್ರವ್ಯಗಳನ್ನೂ ಭೋಜನಾಂಶವನ್ನೂ ಆರಿಸಿದ ಏಳು ಮಂದಿ ಸೇವಕಿಯರನ್ನೂ ಅರಮನೆಯಿಂದ ಬೇಗನೆ ಏರ್ಪಡಿಸಿ ಆಕೆಯನ್ನೂ ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮಭಾಗದಲ್ಲಿರಿಸಿದನು.
Kannada Bible (KNCL) BSI 2016
ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.