Esther 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
Kannada BSI Bible 2016
ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.
Kannada Bible (KNCL) BSI 2016
ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.