Esther 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದ್ಯರ ದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿದನು.
Kannada BSI Bible 2016
ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಯುಂಗುರವನ್ನು ತೆಗೆದು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಯೆಹೂದದ್ವೇಷಿಯೂ ಆದ ಹಾಮಾನನಿಗೆ ಒಪ್ಪಿಸಿ ಅವನಿಗೆ -
Kannada Bible (KNCL) BSI 2016
ಇದನ್ನು ಕೇಳಿದ ಅರಸನು ತನ್ನ ಕೈಬೆರಳಿನಲ್ಲಿದ್ದ ಮುದ್ರೆ ಉಂಗುರವನ್ನು ತೆಗೆದು ಆಗಾಗನ ವಂಶಸ್ಥನೂ ಹೆಮ್ಮೆದಾತನ ಮಗನೂ ಯೆಹೂದ್ಯರ ಕಡುವೈರಿಯೂ ಆದ ಹಾಮಾನನಿಗೆ ಕೊಟ್ಟು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನ ವಂಶಸ್ಥನೂ ಹಮ್ಮೆದಾತನ ಮಗನೂ ಆದ ಹಾಮಾನನಿಗೆ ಕೊಟ್ಟನು.