Esther 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಲ್ಪಡಬೇಕು ಅಲ್ಲದೆ ಆ ದಿನಕ್ಕಾಗಿ ಎಲ್ಲಾ ಜನರೂ ಸಿದ್ಧರಾಗಿರಬೇಕೆಂಬುದಾಗಿ ಬರೆದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಮಾತ್ರವಲ್ಲದೆ, “ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಹೊರಡಿಸಿ ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಎಲ್ಲಾ ಜನರಿಗೆ ತಿಳಿಯುವಂತೆ ಪ್ರಕಟಿಸಬೇಕು” ಎಂದು ಬರೆಯಲಾಗಿತ್ತು.
Kannada BSI Bible 2016
ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಈ ಪತ್ರದ ಒಂದೊಂದು ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿಯೂ ಪ್ರಕಟಿಸಲ್ಪಡಬೇಕು ಎಂದೂ ಬರೆದಿತ್ತು.
Kannada Bible (KNCL) BSI 2016
ಅವರ ಆಸ್ತಿಯನ್ನು ಕೊಳ್ಳೆಹೊಡೆಯಿರಿ. ಎಲ್ಲರೂ ಆ ದಿನಕ್ಕೆ ಸಿದ್ಧರಾಗಿರುವಂತೆ ಈ ಪತ್ರದ ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲೂ ರಾಜಾಜ್ಞೆಯಂತೆ ಪ್ರಕಟವಾಗಲಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು.