Esther 3:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನ ಆಜ್ಞೆಯ ಪ್ರಕಾರ ಸಂದೇಶವಾಹಕರು ದೇಶದೇಶಗಳಿಗೆ ಚದರಿದರು. ರಾಜಧಾನಿಯಾದ ಶೂಷನ್ ನಗರದಲ್ಲೂ ಆ ಸಂದೇಶವನ್ನು ಪ್ರಕಟಿಸಲಾಯಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತರು. ಆದರೆ ರಾಜಧಾನಿಯಲ್ಲಿನ ಜನರು ಗಲಿಬಿಲಿಗೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.
Kannada BSI Bible 2016
ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್‌ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್‌ ಪಟ್ಟಣವು ತಳ ಮಳಗೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.
Kannada Bible (KNCL) BSI 2016
ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.