Esther 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿದಿನ ಆ ಅಧಿಕಾರಿಗಳು ಮೊರ್ದೆಕೈಗೆ ಹೇಳಿದರೂ ಅವನು ಹಾಮಾನನಿಗೆ ಅಡ್ಡಬೀಳಲೂ ಇಲ್ಲ, ಗೌರವಿಸಲೂ ಇಲ್ಲ. ಈ ವಿಷಯವನ್ನು ಅಧಿಕಾರಿಗಳು ಹಾಮಾನನಿಗೆ ತಿಳಿಸಿದರು. ಮೊರ್ದೆಕೈಗೆ ಹಾಮಾನನು ಮಾಡುವದನ್ನು ನೋಡಲು ಕಾದಿದ್ದರು. ಮೊರ್ದೆಕೈ ಅವರಿಗೆ ತಾನು ಯೆಹೂದ್ಯನೆಂದು ತಿಳಿಸಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊರ್ದೆಕೈಯು ತಾನು ಯೆಹೂದ್ಯನೆನ್ನುವ ಹೆಮ್ಮೆಯ ಹಾಗೂ ಮಾನವನಿಗೆ ಸಾಷ್ಟಾಂಗನಮಸ್ಕಾರ ಮಾಡುವುದಿಲ್ಲ ಎಂಬ ಅವನ ಹಟ ಸಾಗುವುದೇನೋ ನೋಡೋಣ ಎಂದುಕೊಂಡು ಅವರು ಅದನ್ನು ಹಾಮಾನನಿಗೆ ತಿಳಿಸಿದರು.
Kannada BSI Bible 2016
ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಿನಂಪ್ರತಿ ಅವನನ್ನು ಎಚ್ಚರಿಸಿದರೂ ಅವನು ಮಣಿಯಲಿಲ್ಲ. ಆದದರಿಂದ ಅವರು - ತಾನು ಯೆಹೂದ್ಯನೆನ್ನುವ ಮೊರ್ದೆಕೈಯ ಹೆಮ್ಮೆಯ ಹಟವು ಸಾಗುವದೇನೋ ನೋಡೋಣ ಎಂದುಕೊಂಡು ಅದನ್ನು ಹಾಮಾನನಿಗೆ ತಿಳಿಸಿದರು.
Kannada Bible (KNCL) BSI 2016
ಹೀಗೆ ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ಹಟವು ಎಲ್ಲಿಯವರೆಗೆ ಸಾಗುವುದೊ ನೋಡಿಯೇ ಬಿಡಬೇಕೆಂದು ಅವನ ಈ ವರ್ತನೆಯ ಬಗ್ಗೆ ಹಾಮಾನನಿಗೆ ದೂರು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಅವರಿಗೆ ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ನಡವಳಿಕೆಯನ್ನು ಸಹಿಸಬಹುದೋ ಎಂದು ಕಾಣಲು ಅವರು ಹಾಮಾನನಿಗೆ ದೂರು ಹೇಳಿದರು.