Esther 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆ ತಿಂಗಳಾದ ನೀಸಾನ್ ತಿಂಗಳಲ್ಲಿ ಒಂದು ನಿರ್ದಿಷ್ಟ ದಿವಸಕ್ಕಾಗಿ ಹಾಮಾನನು ಚೀಟು ಹಾಕಿದನು. ಆಗ ಹನ್ನೆರಡನೆ ತಿಂಗಳಾದ ಆದಾರ್ ಮಾಸವು ಆರಿಸಲ್ಪಟ್ಟಿತು. (ಆ ದಿವಸಗಳಲ್ಲಿ ಚೀಟು ಹಾಕುವದಕ್ಕೆ “ಪೂರ್” ಎಂದು ಅನ್ನುತ್ತಿದ್ದರು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭ ಮಾಸವು ಮತ್ತು ಶುಭದಿನವು ಯಾವುದೆಂದು ತಿಳಿದುಕೊಳ್ಳುವುದಕ್ಕೆ “ಪೂರ್” ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
Kannada BSI Bible 2016
ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್‌ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್‌ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್‌ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಅಹಷ್ವೇರೋಷನ [ಆಳಿಕೆಯ] ಹನ್ನೆರಡನೆಯ ವರುಷದ ಮೊದಲನೆಯ ತಿಂಗಳಾದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿವಸವೂ ಯಾವವೆಂದು ತಿಳಿದುಕೊಳ್ಳುವದಕ್ಕೆ ಪೂರನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
Kannada Bible (KNCL) BSI 2016
ಅರಸ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳು ಆದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ‘ಪೂರ’ನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆ ವರ್ಷದ ಮೊದಲನೆಯ ತಿಂಗಳು ಆದ ನಿಸಾನ ಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ಪೂರ್ ಅನ್ನು ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.