Esther 3:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ರಾಜನೇ, ನೀನು ಸಮ್ಮತಿಸುವದಾದರೆ ನನ್ನ ಸಲಹೆ ಏನೆಂದರೆ, ಆ ಜನರನ್ನು ನಿರ್ಮೂಲ ಮಾಡಲು ಅಪ್ಪಣೆ ಕೊಡು. ನಾನು ಹತ್ತು ಸಾವಿರ ಬೆಳ್ಳಿನಾಣ್ಯಗಳನ್ನು ರಾಜ ಖಜಾನೆಯಲ್ಲಿ ಹಾಕುವೆನು. ಆ ಹಣವನ್ನು ಆ ಕಾರ್ಯ ಮಾಡುವ ಜನರ ಸಂಬಳಕ್ಕಾಗಿ ವಿನಿಯೋಗಿಸಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನ ಚಿತ್ತವಾದರೆ ಅವರನ್ನು ಸಂಹರಿಸಬೇಕು ಎಂಬ ಆಜ್ಞೆಯು ಹೊರಡಲಿ; ಹಾಗೆ ಮಾಡಿದರೆ ನಾನು ರಾಜಭಂಡಾರಕ್ಕಾಗಿ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು” ಎಂದು ಹೇಳಿದನು.
Kannada BSI Bible 2016
ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನ ಚಿತ್ತ ಬಂದರೆ ಅವರನ್ನು ಸಂಹರಿಸಬೇಕು ಎಂಬ ರಾಯಸವು ಹೊರಡಲಿ; ಹಾಗೆ ಮಾಡಿದರೆ ನಾನು ರಾಜ ಭಂಡಾರಗಳಿಗೆ ಸೇರಿಸುವದಕ್ಕೋಸ್ಕರ ಹತ್ತು ಸಾವಿರ ತಲಾಂತು ಬೆಳ್ಳಿಯನ್ನು ತೂಕ ಮಾಡಿ ಉದ್ಯೋಗಸ್ಥರ ಕೈಗೆ ಒಪ್ಪಿಸುವೆನು ಎಂದು ಹೇಳಿದನು.
Kannada Bible (KNCL) BSI 2016
ಅರಸರಿಗೆ ಸಮ್ಮತಿ ಆದರೆ ಅವರನ್ನು ನಿರ್ಮೂಲಮಾಡುವಂತೆ ಆಜ್ಞೆ ಒಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಂ ಬೆಳ್ಳಿಯನ್ನು ಖಜಾಂಚಿಯರ ಕೈಗೊಪ್ಪಿಸುವೆನು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.