Esther 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಡೆದ ಎಲ್ಲಾ ಸಂಗತಿಗಳನ್ನು ಮೊರ್ದೆಕೈ ಕೇಳಿಕೊಂಡನು. ಯೆಹೂದ್ಯರನ್ನೆಲ್ಲಾ ಕೊಲ್ಲಲು ರಾಜಾಜ್ಞೆ ಹೊರಟಿದೆ ಎಂದು ಕೇಳಿದಾಗ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ಶೋಕದ ಬಟ್ಟೆಗಳನ್ನು ಧರಿಸಿ ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡನು. ಆಮೇಲೆ ಗಟ್ಟಿಯಾಗಿ ಅಳುತ್ತಾ ನಗರ ಬೀದಿಗಳಲ್ಲಿ ನಡೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ತಲೆಯ ಮೇಲೆ ಹಾಕಿಕೊಂಡು, ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ಮಹಾದುಃಖದಿಂದ ಗೋಳಾಡಿದನು.
Kannada BSI Bible 2016
ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ಬಟ್ಟೆಗಳನ್ನು ಹರಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ದುಃಖಾತಿಶಯದಿಂದ ಗೋಳಾಡಿ
Kannada Bible (KNCL) BSI 2016
ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.