Esther 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಈಗ ಸುಮ್ಮನಿದ್ದರೆ ಯೆಹೂದ್ಯರಿಗೆ ಸಹಾಯವೂ ಸ್ವಾತಂತ್ರ್ಯವೂ ಬೇರೆ ದಿಕ್ಕಿನಿಂದ ಬರುವವು. ಆದರೆ ನೀನೂ ನಿನ್ನ ತಂದೆಯ ಬಳಗದವರೆಲ್ಲರೂ ಸಾಯುವರು. ಇಂಥ ಸಮಯದಲ್ಲಿ ನೀನು ರಾಣಿಯಾಗಿ ಆಯ್ಕೆಯಾದದ್ದು ಇದಕ್ಕೋಸ್ಕರವೋ ಎಂದು ಯಾರಿಗೆ ಹೇಳಲು ಸಾಧ್ಯ?”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಈಗ ಸುಮ್ಮನಿದ್ದುಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ, ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು” ಎಂದು ಹೇಳಿಕಳುಹಿಸಿದನು.
Kannada BSI Bible 2016
ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.
Kannada Bible (KNCL) BSI 2016
ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.