Esther 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಶೋಕವನ್ನು ಸೂಚಿಸುವ ಬಟ್ಟೆಗಳನ್ನು ಧರಿಸಿದ್ದ ಕಾರಣ ಅರಮನೆಯ ಹೆಬ್ಬಾಗಿಲ ತನಕ ಮಾತ್ರವೇ ಅವನಿಗೆ ಹೋಗಲು ಸಾಧ್ಯವಾಯಿತು. ಅರಮನೆಯ ಪ್ರಾಕಾರದೊಳಗೆ ಶೋಕವಸ್ತ್ರವನ್ನು ಧರಿಸಿ ಯಾರೂ ಹೋಗುವ ಹಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಣಿತಟ್ಟು ಕಟ್ಟಿಕೊಂಡವರು ಅರಮನೆಯ ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು. ಆದುದರಿಂದ ಅವನು ಅರಮನೆಯ ಹೆಬ್ಬಾಗಿಲಿನ ಮುಂದೆ ಬಂದನು.
Kannada BSI Bible 2016
ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಮನೆಯ ಹೆಬ್ಬಾಗಲಿನ ಮುಂದೆ ಬಂದನು; ಗೋಣಿತಟ್ಟು ಕಟ್ಟಿಕೊಂಡವರು ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು.
Kannada Bible (KNCL) BSI 2016
ಅದೇ ಸ್ಥಿತಿಯಲ್ಲಿ ಅರಮನೆಯ ಹೆಬ್ಬಾಗಿಲವರೆಗೂ ಬಂದನು. ಗೋಣಿತಟ್ಟನ್ನು ಉಟ್ಟವರು ಯಾರೂ ಒಳಗೆ ಪ್ರವೇಶಿಸಕೂಡದೆಂಬ ನಿಷೇಧಾಜ್ಞೆ ಜಾರಿಯಲ್ಲಿ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅರಸನ ಅರಮನೆಯ ಬಾಗಿಲಿನವರೆಗೆ ಬಂದನು. ಏಕೆಂದರೆ ಗೋಣಿತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಿಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.