Esther 4:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಸಂಸ್ಥಾನದಲ್ಲೂ ರಾಜನ ಆಜ್ಞೆ ಪ್ರಕಟಿಸಲ್ಪಟ್ಟಾಗ ಯೆಹೂದ್ಯರೊಳಗೆ ಕೂಗಾಟವೂ ದುಃಖವೂ ತುಂಬಿತು. ಉಪವಾಸ ಮಾಡುತ್ತಾ ಅವರು ಗಟ್ಟಿಯಾಗಿ ರೋಧಿಸಿದರು. ಎಷ್ಟೋ ಮಂದಿ ಯೆಹೂದ್ಯರು ಶೋಕವಸ್ತ್ರವನ್ನು ಧರಿಸಿ ತಲೆಗೆ ಬೂದಿ ಸುರಿದು ನೆಲದ ಮೇಲೆ ಬಿದ್ದುಕೊಂಡು ಗಟ್ಟಿಯಾಗಿ ಅತ್ತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.
Kannada BSI Bible 2016
ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು.
Kannada Bible (KNCL) BSI 2016
ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದ ಸಂಸ್ಥಾನಗಳಲ್ಲೆಲ್ಲಾ ಯೆಹೂದ್ಯರೊಳಗೆ ಅತೀವ ದುಃಖವುಂಟಾಗಿ ಅನೇಕರು ಉಪವಾಸ ಕೈಗೊಂಡರು. ರೋದನ-ಆಕ್ರಂದನಗಳೊಡನೆ ಗೋಣಿತಟ್ಟನ್ನು ಹೊದ್ದು ಬೂದಿಯಲ್ಲಿ ಕುಳಿತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.
Recommended Reading