Esther 4:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಎಸ್ತೇರಳು ಹತಾಕನನ್ನು ಬರಹೇಳಿದಳು. ಹತಾಕನು ರಾಜಕಂಚುಕಿಯಾಗಿದ್ದು ಎಸ್ತೇರ್ ರಾಣಿಯ ಸೇವೆಯನ್ನು ಮಾಡುವವನಾಗಿದ್ದನು. ಹತಾಕನಿಗೆ ಹೋಗಿ ಮೊರ್ದೆಕೈಗೆ ಏನು ತೊಂದರೆಯಾಯಿತು; ಅವನು ಯಾತಕ್ಕಾಗಿ ದುಃಖತಪ್ತನಾಗಿದ್ದಾನೆ ಎಂಬುದನ್ನು ವಿಚಾರಿಸಿಕೊಂಡು ಬರಲು ಆಜ್ಞಾಪಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇಮಿಸಲ್ಪಟ್ಟಿದ್ದ ಹತಾಕನೆಂಬ ರಾಜ ಕಂಚುಕಿಯನ್ನು ಕರೆಯಿಸಿ, “ನೀನು ಮೊರ್ದೆಕೈಯ ಬಳಿಗೆ ಹೋಗಿ, ಇದಕ್ಕೆ ಕಾರಣವೇನು ಎಂದು ವಿಚಾರಿಸಿಕೊಂಡು ಬಾ” ಎಂದು ಹೇಳಿಕಳುಹಿಸಿದಳು.
Kannada BSI Bible 2016
ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇವಿುಸಲ್ಪಟ್ಟಿದ್ದ ಹತಾಕನೆಂಬ ರಾಜಕಂಚುಕಿಯನ್ನು ಕರಿಸಿ - ನೀನು ಮೊರ್ದೆಕೈಯ ಬಳಿಗೆ ಹೋಗಿ ಇದೇನು, ಯಾಕೆ ಎಂದು ವಿಚಾರಿಸಿಕೊಂಡು ಬಾ ಎಂದು ಹೇಳಿಕಳುಹಿಸಿದಳು.
Kannada Bible (KNCL) BSI 2016
ಆಗ ಎಸ್ತೇರಳು ತನ್ನ ಸೇವೆಗಾಗಿ ನೇಮಿಸಲಾಗಿದ್ದ ರಾಜಕಂಚುಕಿಗಳಲ್ಲಿ ಒಬ್ಬನಾದ ಹತಾಕನನ್ನು ಕರೆದು, ಮೊರ್ದೆಕೈ ಬಳಿಗೆ ಕಳುಹಿಸಿ, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ಈ ವರ್ತನೆಗೆ ಕಾರಣವಾದರೂ ಯಾವುದೆಂದು ವಿಚಾರಿಸಿಕೊಂಡು ಬರುವಂತೆ ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಸ್ತೇರಳು ತನ್ನ ಬಳಿಯಲ್ಲಿ ಸೇವೆಗಾಗಿ ನೇಮಿಸಲಾಗಿದ್ದ ಅರಸನ ರಾಜಕಂಚುಕಿಯರಲ್ಲಿ ಹತಾಕನನ್ನು ಕರೆದು, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ವರ್ತನೆಗೆ ಕಾರಣವನ್ನೂ ಅವನಿಂದ ತಿಳಿದುಕೊಂಡು ಬರಬೇಕೆಂದು ಆಜ್ಞಾಪಿಸಿದಳು.