Esther 4:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊರ್ದೆಕೈ ನಡೆದ ಸಂಗತಿಗಳನ್ನೆಲ್ಲಾ ಹೇಳಿದನು. ಮತ್ತು ಹಾಮಾನನು ರಾಜನಿಗೆ ಯೆಹೂದ್ಯರನ್ನು ಕೊಲ್ಲಿಸಲು ಆಜ್ಞೆ ಹೊರಡಿಸಿದ್ದುದಕ್ಕಾಗಿ ಕೊಟ್ಟ ಹಣದ ಸರಿಯಾದ ಮೊತ್ತವನ್ನು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊರ್ದೆಕೈಯು ತನಗೆ ಸಂಭವಿಸಿದ್ದೆಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡುತ್ತೇನೆಂದು ನಿಗದಿಪಡಿಸಿದ ಬೆಳ್ಳಿಯ ಹಣ ಇಷ್ಟೆಂಬುದನ್ನೂ ಅವನಿಗೆ ತಿಳಿಸಿದನು.
Kannada BSI Bible 2016
ಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊರ್ದೆಕೈಯು ತನಗೆ ಸಂಭವಿಸಿದದ್ದೆಲ್ಲವನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡಲು ಅಪ್ಪಣೆಪಡಕೊಳ್ಳುವದಕ್ಕಾಗಿ ರಾಜಭಂಡಾರಕ್ಕೆ ತೂಕಮಾಡಿ ಕೊಡುತ್ತೇನೆಂದು ವಾಗ್ದಾನಮಾಡಿದ ಸರಿಯಾದ ಹಣದ ಗಂಟು ಇಷ್ಟೆಂಬದನ್ನೂ ಅವನಿಗೆ ತಿಳಿಸಿದ್ದಲ್ಲದೆ
Kannada Bible (KNCL) BSI 2016
ಅವನು, ನಡೆದ ಎಲ್ಲಾ ವಿಷಯಗಳನ್ನು ಮತ್ತು ಯೆಹೂದ್ಯರನ್ನು ನಾಶಮಾಡಲು ಅನುಮತಿ ಪಡೆದುಕೊಳ್ಳುವುದಕ್ಕಾಗಿ ಹಾಮಾನನು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿದ ನಿಗದಿತ ಹಣದ ವಿಷಯವನ್ನು ಅವನಿಗೆ ವಿವರಿಸಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೊರ್ದೆಕೈ ತನಗೆ ಆದ ಎಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣದ ವಿಷಯವನ್ನೂ ಅವನಿಗೆ ತಿಳಿಸಿದನು.