Esther 5:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ, ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತುಕೊಂಡಿದ್ದನು.
Kannada BSI Bible 2016
ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯ ದಿನದಲ್ಲಿ ಎಸ್ತೇರಳು ರಾಜವಸ್ತ್ರ ಭೂಷಿತಳಾಗಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜ ಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದಲ್ಲಿ ರಾಜಸಿಂಹಾಸನದ ಮೇಲೆ ಬಾಗಲಿಗೆದುರಾಗಿ ಕೂತುಕೊಂಡಿದ್ದನು.
Kannada Bible (KNCL) BSI 2016
ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.